ರಾಯಚೂರು: ನಗರಸಭೆ ಆಡಳಿತವು ಸಂಪೂರ್ಣವಾಗಿ ಕುಸಿದಿದ್ದು, ನಗರಸಭೆಯ ಪ್ರಾಭಾರಿ ಪೌರಾಯುಕ್ತರು ರಾಜಕೀಯ ಪ್ರಭಾವದಿಂದ ಪ್ರಭಾರಿ ಪೌರಾಯುಕ್ತ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಜು ಪಟ್ಟಿ ಆರೋಪಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯ ಪ್ರಭಾರಿ ಪೌರಾಯುಕ್ತರಾಗಿರುವ ಡಾ. ದೇವಾನಂದ ದೊಡ್ಡಮನಿ ಅವರ ಮೂಲ ಹುದ್ದೆ ಸಮುದಾಯ ಸಂಘಟನಾಧಿಕಾರಿಯಾಗಿದ್ದು, ರಾಜಕೀಯ ಪ್ರಭಾವ ಬಳಸಿ ನಗರಸಭೆಯ ಪ್ರಭಾರಿ ಪೌರಾಯುಕ್ತ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ. ಪ್ರಭಾರಿ ಪೌರಾಯುಕ್ತರು ಕಚೇರಿಗೆ ಅತಿಥಿಯಂತೆ ಬಂದು ಹೋಗುತ್ತಾರೆ. ತಮ್ಮ ಎಲ್ಲಾ ಕಾರ್ಯಗಳು ಮನೆಯಲ್ಲಿ ನಿರ್ವಹಿಸುತ್ತಿರುವುದರಿಂದ ನಗರಸಭೆ ಅಡಳಿತ ಸಂಪೂರ್ಣವಾಗಿ ಕುಸಿದಿದೆ ಎಂದರು.
ಅದಲ್ಲದೆ ಕೋವಿಡ್-19 ಹೆಸರಲ್ಲಿ ಕಾನೂನು ಬಾಹಿರವಾಗಿ ಟೆಂಡರ್ ಕರೆದು, ಏಕಾಯಕಿ ಸದರಿ ಟೆಂಡರ್ ರದ್ದು ಮಾಡಿದ್ದು, ಗುತ್ತಿಗೆದಾರರ ಮುಖಾಂತರ ಭಾರೀ ಮೊತ್ತದ ಬ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದರು. ಈ ಮೇಲಿನ ಅಂಶಗಳನ್ನು ಗಮನಿಸಿ ತಪ್ಪಿತಸ್ಥ ಅಧಿಕಾರಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿಗಳು ನಗರಸಭೆ ಪೌರಾಯುಕ್ತರ ಹುದ್ದೆಗೆ ಪ್ರಾಮಾಣಿಕ ಅಧಿಕಾರಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.