ETV Bharat / state

ಸಿಎಂ ಸ್ಥಾನ ಬದಲಾವಣೆ ಮಾಡಿದರೆ ಬಿಜೆಪಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ: ರಂಭಾಪುರಿ ಶ್ರೀ - ರಾಯಚೂರು ಸುದ್ದಿ

ಬಿ.ಎಸ್.ಯಡಿಯೂರಪ್ಪ ಅವರನ್ನೇ ಸಿಎಂ ಆಗಿ ಮುಂದುವರಿಸಬೇಕು. ಇಲ್ಲವಾದಲ್ಲಿ, ಬಿಜೆಪಿ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ರಂಭಾಪುರಿ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ರಂಭಾಪುರಿ ಶ್ರೀ
ರಂಭಾಪುರಿ ಶ್ರೀ
author img

By

Published : Jul 19, 2021, 12:33 PM IST

ರಾಯಚೂರು: ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆ ಮಾಡಿದರೆ ಬಿಜೆಪಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠ ಜಗದ್ಗುರು ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದ್ದಾರೆ.

ರಾಯಚೂರಿನ ಕಿಲ್ಲೇ ಬೃಹನ್​ ಮಠದದಲ್ಲಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರ ಎನ್ನುವುದು ಸಂಘರ್ಷವಿದ್ದಂತೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಿದ್ರೆ, ಮುಂದಿನ ದಿನಗಳಲ್ಲಿ ಬಿಜೆಪಿ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ಈ ಇಳಿವಯಸ್ಸಿನಲ್ಲೂ ಯಡಿಯೂರಪ್ಪ ರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಿದ್ದು, ಎಲ್ಲ ಜಾತಿ, ಜನಾಂಗದವರು ಅವರನ್ನು ಬೆಂಬಲಿಸಿವೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೊನಾ, ನೆರೆ ಸೇರಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದವು. ಅವುಗಳೆಲ್ಲವನ್ನೂ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ, ರಾಷ್ಟ್ರೀಯ ನಾಯಕರು ಯಡಿಯೂರಪ್ಪರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಲಿದ್ದಾರೆ ಅನ್ನೋ ವಿಶ್ವಾಸವಿದೆ. ಯಡಿಯೂರಪ್ಪಗೆ ಸುತ್ತೂರು ಶ್ರೀಗಳು, ಆದಿ ಚುಂಚನಗಿರಿ ಶ್ರೀಗಳು ಸೇರಿ ಬಹುತೇಕ ಮಠಾಧೀಶರು ಬೆಂಬಲ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಸಿಎಂ ಬದಲಾವಣೆ ವಿಚಾರ ಕುರಿತು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಅನಿಲ್ ಬೆನಕೆ

ಯಡಿಯೂರಪ್ಪ ಅಧಿಕಾರವಧಿಯಲ್ಲಿ ಮಠ, ಮಂದಿರ, ಮಸೀದಿಗಳು, ಚರ್ಚೆಗಳ ಅಭಿವೃದ್ದಿಗಾಗಿ ಅನುದಾನ ನೀಡುವ ಮೂಲಕ ಜನಪರ ನಾಯಕರಾಗಿದ್ದಾರೆ. ಅವರು ಬದಲಾವಣೆ ಆಗುವುದಿಲ್ಲ ಎಂದು ಶ್ರೀಗಳು ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.