ETV Bharat / state

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಚುನಾವಣೆ ಮೇಲೆ ಪ್ರಭಾವ ಬೀರಲ್ಲ: ಪ್ರತಾಪ್‌ಗೌಡ ಪಾಟೀಲ್

author img

By

Published : Mar 29, 2021, 12:18 PM IST

ಇಂದು ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಚುನಾವಣೆಯ ಮೇಲೆ ರಮೇಶ್​ ಜಾರಕಿಹೊಳಿಯವರ ಸಿಡಿ ಪ್ರಕರಣ ಯಾವುದೇ ಪ್ರಭಾವ ಬೀರಲ್ಲ ಎಂದಿದ್ದಾರೆ.

ಪ್ರತಾಪ್‌ಗೌಡ ಪಾಟೀಲ್
Pratap Gowda Patil

ರಾಯಚೂರು: ಮಸ್ಕಿ ಉಪಚುನಾವಣೆಯ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವುದೇ ಪರಿಣಾಮ ಬೀರಲ್ಲ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್ ಹೇಳಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್ ಹೇಳಿಕೆ

ಇಂದು ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್‌ಗೌಡ ಪಾಟೀಲ್ ಅವರು ನಾಮಪತ್ರ ಸಲ್ಲಿಸಲಿದ್ದು, ಈ ಹಿನ್ನೆಲೆಯಲ್ಲಿ ಮಸ್ಕಿ ಪಟ್ಟಣದ ಬಸವೇಶ್ವರ ನಗರದಲ್ಲಿರುವ ಬಲಮೂರಿ ಗಣೇಶ ದೇವಾಲಯಕ್ಕೆ ಭೇಟಿ ನೀಡಿ ದೇವಾಲಯದಲ್ಲಿ ನಾಮಪತ್ರವನ್ನಿಟ್ಟು ಪೂಜೆ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೊಂದು ನಕಲಿ ಸಿಡಿಯಾಗಿದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬೀಳಲಿದೆ. ಅವರು ನಾವು ಮುಂಬೈಯಲ್ಲಿದ್ದಾಗ ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ನಕಲಿ ಸಿಡಿ ಬಳಿಸಿ ತೆಜೋವಧೆ ಮಾಡಬಹುದೆಂದು ಆರು ಜನ ಸಚಿವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂದರು.

‌ಓದಿ: ನಾಮಪತ್ರ ಸಲ್ಲಿಕೆಗೆ ಒಳ್ಳೆಯ ಘಳಿಗೆ, ಕೆಟ್ಟ ಘಳಿಗೆ ಅಂತೇನೂ ಇಲ್ಲ: ಸತೀಶ್ ಜಾರಕಿಹೊಳಿ‌

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಚಾರಕ್ಕೆ ಬರುವ ಸಾಧ್ಯತೆ ಕಡಿಮೆಯಿದ್ದು, ಅವರ ಮಗ ಇಲ್ಲಿಯೇ ಇದ್ದ ನನ್ನ ಪರವಾಗಿ ಪ್ರಚಾರ ಮಾಡಲಿದ್ದಾರೆ. ಕ್ಷೇತ್ರದಲ್ಲಿ ಜನರು ಬಿಜೆಪಿ ಪರವಾಗಿದ್ದಾರೆ. 2018ನೇ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಮತಗಳು ಬಂದಿದ್ದವು. ಈ ಕಾರಣಕ್ಕೆ ನಾನು ಬಿಜೆಪಿಗೆ ಬಂದಿದ್ದು, ಸ್ವಾರ್ಥಕ್ಕಾಗಿ ರಾಜಕಾರಣಕ್ಕೆ ಬಂದಿಲ್ಲ. ಈ ಬಾರಿ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.