ETV Bharat / state

Rape on minor girl: ಸ್ಕೂಟಿ ಕಲಿಸುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಕಾಮುಕನ ಬಂಧನ - Rape on minor girl

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಸಿಂಧನೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

minor-girl-raped-in-raichur
ಸ್ಕೂಟಿ ಕಲಿಸುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಅತ್ಯಾಚಾರ : ಆರೋಪಿ ಬಂಧನ
author img

By

Published : Jun 21, 2023, 3:48 PM IST

ರಾಯಚೂರು : ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಾಮಾತುರಂ ನ ಲಜ್ಜಾ, ನ ಭಯಂ ಎಂಬಂತೆ ಕಾಮುಕ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಸದ್ಯ ಕಂಬಿ ಹಿಂದೆ ತಳ್ಳಿದ್ದಾರೆ.

ಹೌದು, ಸ್ಕೂಟಿ ಕಲಿಸುವ ನೆಪದಲ್ಲಿ ಕರೆದೊಯ್ದು 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಈ ಪ್ರಕರಣ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಪನ್ ಮಂಡಲ್ (52) ಬಂಧಿತ ಆರೋಪಿ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಾಕೊಲೇಟ್​ ಕೊಡಿಸುವುದಾಗಿ ಕರೆದೊಯ್ದು ದುಷ್ಕೃತ್ಯ.. ಕಳೆದ ಜೂನ್ 19ರಂದು ಘಟನೆ ನಡೆದಿದೆ.​ 4ನೇ ತರಗತಿ ಓದುತ್ತಿರುವ ಬಾಲಕಿ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಶಾಲೆಗೆ ಹೋಗಲು ಸಿದ್ಧವಾಗಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಸಪನ್ ಮಂಡಲ್ ಎಂಬಾತ ಬಾಲಕಿಯನ್ನು ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ತನ್ನ ಸ್ಕೂಟಿಯಲ್ಲಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಚಾಕೊಲೇಟ್​​ ಕೊಡಿಸದೇ ಸ್ಕೂಟಿ ಕಲಿಸುತ್ತೇನೆ ಎಂದು ಕರೆದುಕೊಂಡು ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಳಿಕ ಆರೋಪಿಯು ಬಾಲಕಿಯನ್ನು ಮನೆಯಿಂದ ತುಸು ದೂರ ಬಿಟ್ಟು ಪರಾರಿಯಾಗಿದ್ದಾನೆ.

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಆಳುತ್ತ ಮನೆಗೆ ಬರುತ್ತಿರುವುದನ್ನು ಕಂಡ ಪೋಷಕರು ಗಾಬರಿಗೊಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಲಕಿಯ ಪೋಷಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಕ್ಸೋ ಕೇಸ್​ ದಾಖಲು.. ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಆರೋಪಿ ಕೃತ್ಯವೆಸಗಿ ಸಿಂಧನೂರು ನಗರದಲ್ಲಿ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ಪಿಎಸ್‌ಐ ಕೆ. ಎಚ್. ಮಣಿಕಂಠ ನೇತೃತ್ವದ ತಂಡ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಆರೋಪಿ: ವಿಚಾರಣೆ ವೇಳೆ ಆರೋಪಿಯು ಅತ್ಯಾಚಾರ ಎಸಗಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಮಹಿಳೆ ಕೊಂದು ಸುಟ್ಟು ಹಾಕಿದ ಹಂತಕ ಸೆರೆ; 7 ದಿನಗಳ ನಂತರ ಪ್ರಕರಣ ಬಯಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.