ರಾಯಚೂರು: ನಾಲ್ಕು ವರ್ಷದ ಬಾಲಕಿಯ ಮೇಲೆ ನಲವತ್ತು ವರ್ಷದ ಕಾಮುಕ ಅತ್ಯಾಚಾರ ಎಸಗಿರುವಂತಹ ತಲೆ ತಗ್ಗಿಸುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಹೆಚ್.ಕ್ಯಾಂಪ್-2ರಲ್ಲಿ ಈ ಘಟನೆ ನಡೆದಿದೆ. ನಲವತ್ತು ವರ್ಷದ ಅಮುಲ್ ಮೋಹಲ್ದಾರ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪಿಯಾಗಿದ್ದಾನೆ.
ಬಾಲಕಿಯ ಮನೆಯವರು ಹೊಲಕ್ಕೆ ತೆರಳಿದ್ದನ್ನು ಗಮನಿಸಿ ಆತ, ಮನೆಯ ಬಳಿ ಆಟವಾಡುತ್ತಿದ್ದ ಮಗುವಿಗೆ ಚಾಕೋಲೆಟ್ ಕೊಡಿಸುವ ಆಮಿಷ ಒಡ್ಡಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.