ರಾಯಚೂರು: ಜಿಲ್ಲೆಯ ಮುಷ್ಠೂರು-ಅರಕೇರಾ ಗ್ರಾಮದ ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ದೇವದುರ್ಗ ತಾಲೂಕಿನ ಮುಷ್ಠೂರಿನಿಂದ ಅರಕೇರಾ ಗ್ರಾಮದವರೆಗಿನ 8 ಕಿ.ಮೀ. ರಸ್ತೆ ಹದಗೆಟ್ಟು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಈ ಹಿನ್ನೆಲೆ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು, ದಲಿತ ಸಂಘಟನೆ ಹಾಗೂ ಕಾಂಗ್ರೆಸ್ ಮುಖಂಡರು ಮುಷ್ಠೂರಿನಿಂದ ಅರಕೇರಾ ಗ್ರಾಮದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು.
ಆದರೆ ಪಾದಯಾತ್ರೆಯನ್ನು ಮೊಟಕುಗೊಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಈ ವೇಳೆ ಪ್ರತಿಭಟನಾನಿರತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದು, ಪೊಲೀಸರು ಹಾಗೂ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.