ಲಿಂಗಸುಗೂರು (ರಾಯಚೂರು): ನಾರಾಯಣಪುರ ಅಣೆಕಟ್ಟಿನಿಂದ 29 ಕ್ರಸ್ಟ್ ಗೇಟ್ಗಳ ಮೂಲಕ 1.98 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಟ್ಟ ಪರಿಣಾಮ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ಇದರಿಂದಾಗಿ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ನಡುಗಡ್ಡೆ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಕೃಷಿ, ತೋಟಗಾರಿಕೆ ಕೆಲಸಕ್ಕೆ ತೆರಳುವ ಕೂಲಿ ಕಾರ್ಮಿಕರು ಸೇತುವೆ ಮುಳುಗಡೆಯಾಗಿದ್ದರಿಂದ ಮನೆಗೆ ವಾಪಸ್ ಆಗಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಉಪವಿಭಾಗಾಧಿಕಾರಿ ರಾಹುಲ್ ಸಂಕನೂರು, ತಹಶೀಲ್ದಾರ್ ಚಾಮರಾಜ ಪಾಟೀಲ್ ನೇತೃತ್ವದ ಕಂದಾಯ ಅಧಿಕಾರಿಗಳ ತಂಡ, ನಡುಗಡ್ಡೆ ಗ್ರಾಮಗಳಿಗೆ ತೆರಳಿ ಪ್ರವಾಹದ ಕುರಿತು ಜನರಿಗೆ ಜಾಗೃತಿ ಮೂಡಿಸಿದ್ದಾರೆ.
ಇದನ್ನೂ ಓದಿ: Watch video: ನಿರಂತರ ಮಳೆಗೆ ಧಾರವಾಡ ತತ್ತರ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು