ರಾಯಚೂರು: ಕೋಲಾರ ಜಿಲ್ಲೆ ಬಂಗಾರಪೇಟೆಯ ತಹಶೀಲ್ದಾರ್ ಕೊಲೆ ಪ್ರಕರಣ ಖಂಡಿಸಿ, ಜಿಲ್ಲೆಯ ಲಿಂಗಸುಗೂರಲ್ಲಿ ಕಂದಾಯ ಇಲಾಖೆ ನೌಕರರು ಪ್ರತಿಭಟನೆ ನಡೆಸಿದರು.
ಮೃತ ತಹಶೀಲ್ದಾರ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವ ಜೊತೆಗೆ ಕುಟುಂಬಸ್ಥರಿಗೆ ಸೂಕ್ತ ರಕ್ಷಣೆ ನೀಡಬೇಕು. ತಹಶೀಲ್ದಾರ್ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ನೌಕರರು ಆಗ್ರಹಿಸಿದರು.
ಇನ್ನು, ರಾಜ್ಯವ್ಯಾಪಿ ನೌಕರರ ಮೆಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ, ಕೊಲೆ ತಡೆಯಲು ಕಠಿಣ ಕಾನೂನು ಜಾರಿಗೆ ತರುವಂತೆ ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.