ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜುಟುಮರಡಿ ಗ್ರಾಮದಲ್ಲಿ ಮತಗಟ್ಟೆ ಕೇಂದ್ರದ 100 ಮೀಟರ್ ಒಳಗಡೆ ಜನರು ಬಂದಾಗ ಹೊರಹೋಗುವಂತೆ ಪೊಲೀಸರು ಹೇಳಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.
ಮತಗಟ್ಟೆ ಕೇಂದ್ರದ 100ಮೀ. ಒಳಗಡೆ ಜನರು ಜಮಾವಣೆಗೊಂಡಿದ್ರು. ಈ ವೇಳೆ ಹೊರಗಡೆ ಹೋಗುವಂತೆ ಪೊಲೀಸರು ಗ್ರಾಮಸ್ಥರಿಗೆ ಹೇಳಿದ್ದಾರೆ. ಆಗ ಇಬ್ಬರ ನಡುವೆ ವಾಗ್ವಾದ ಉಂಟಾಗಿದೆ. ಇದರಿಂದ ಕೆಲಕಾಲ ಗೊಂದಲ ಉಂಟಾಗಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಓದಿ: ಮತಗಟ್ಟೆ ಎದುರೇ ಎರಡು ಗುಂಪುಗಳ ಮಧ್ಯೆ ಗಲಾಟೆ
ಇನ್ನು, ಗಲಾಟೆಯಲ್ಲಿ ಕಲ್ಲು ತೂರಾಟ ಮಾಡಿರುವ ಆರೋಪ ಕೇಳಿ ಬಂದಿತ್ತು. ಆದ್ರೆ ಪೊಲೀಸರು ಯಾವುದೇ ಕಲ್ಲು ತೂರಾಟವಾಗಿಲ್ಲವೆಂದು ಹೇಳಿದ್ದಾರೆ.