ರಾಯಚೂರು : ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಕೊತ್ತಿಗುಡ್ಡ ಸಮೀಪ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಕೊತ್ತಿಗುಡ್ಡ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಮೃತನನ್ನು ಅಂಬಣ್ಣ ನಾಯಕ ದೊರೆ(38) ಎಂದು ಗುರುತಿಸಲಾಗಿದೆ.

ದೇವದುರ್ಗ ಪಟ್ಟಣದಿಂದ ಮಾರಕದಿನ್ನಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.