ಅಥಣಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಹರಿಯುವ ಕೃಷ್ಣ ನದಿ ನೀರಿನ ಪ್ರಮಾಣ ತಗ್ಗಿದ್ದು, ಅಥಣಿ ತಾಲೂಕಿನಿಂದ ಬಾಗಲಕೋಟೆಯ ಜಮಖಂಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಮುಕ್ತವಾಗಿದೆ.
ಮಹಾರಾಷ್ಟ್ರದಿಂದ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ನೆರೆಯಿಂದ ತತ್ತರಿಸಿದ ಈ ಭಾಗದ ಜನತೆ ಈಗ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ.
ಝುಂಜರವಾಡ ಗ್ರಾಮದಿಂದ ತುಬಚಿ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸುಮಾರು ಒಂದು ತಿಂಗಳ ನಂತರ ಸಂಚಾರಕ್ಕೆ ಮುಕ್ತವಾಗಿದೆ.