ರಾಯಚೂರು: ಕೆನರಾ ಬ್ಯಾಂಕ್ ದರೋಡೆ ಮಾಡಲು ಯತ್ನಿಸಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ನ ಬೀಗ ಮುರಿದು ದರೋಡೆ ಮಾಡಲು ಯತ್ನಿಸಿದ್ದಾರೆ. ಆಗ ಬೀಗ ಮುರಿಯಲು ಸಾಧ್ಯವಾಗದೇ ಪಕ್ಕದಲ್ಲಿನ ಎಟಿಎಂ ಕಳ್ಳತನಕ್ಕೆ ಮುಂದಾಗಿದ್ದಾರೆ. ಅಕ್ಕಪಕ್ಕದ ಮನೆಯವರು ಶಬ್ದ ಕೇಳಿ ಹೊರ ಬಂದಿದ್ದು, ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.