ರಾಯಚೂರು: ಖಡಕ್ ಐಎಎಸ್ ಆಫೀಸರ್ ಆಗಿರುವ ರೋಹಿಣಿ ಸಿಂಧೂರಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆಗಿದ್ದಾರೆ ಎನ್ನುವ ಬಿಸಿ ಬಿಸಿ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ.
ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಎಡದೊರೆಯ ನಾಡು, ಭತ್ತದ ಬಿಡು, ರಾಯಚೂರು ಮುಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಂಬ ಪೋಟೋ ವೈರಲ್ ಆಗುವ ಮೂಲಕ ಈ ಒಂದು ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಸದ್ಯ ಈ ಪೋಟೋ ಹಲವು ವಾಟ್ಸಪ್ ಗ್ರೂಪ್‌ಗಳಲ್ಲಿ ಶೇರ್ ಆಗುತ್ತಿದ್ದರೆ, ಇನ್ನು ಕೆಲವರು ವಾಟ್ಸಪ್ ಸ್ಟೇಟಸ್ ಹಾಗೂ ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ದಕ್ಷ ಅಧಿಕಾರಿಯೆಂದೇ ಖ್ಯಾತಿ ಗಳಿಸಿರುವ ರೋಹಿಣಿ ಸಿಂಧೂರಿ ಅವರು ರಾಯಚೂರು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬರುತ್ತಾರ ಎನ್ನುವ ಬಿಸಿ ಚರ್ಚೆ ಎಲ್ಲೆಡೆ ನಡೆಯುತ್ತಿದೆ.
![Rohini Sindhuri as Raichur DC](https://etvbharatimages.akamaized.net/etvbharat/prod-images/3303554_740_3303554_1558038016072.png)
ಅಲ್ಲದೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸದ್ಯ ಯಾವುದೇ ವರ್ಗಾವಣೆ ಪ್ರಕ್ರಿಯೆಯನ್ನು ಸರಕಾರ ನಡೆಸುತ್ತಿಲ್ಲವಾದರೂ ಇಂತಹ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.