ರಾಯಚೂರು: ಮನೆಯ ಮೇಲ್ಛಾವಣಿ ಕುಸಿದು ಉಸಿರುಗಟ್ಟಿ ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಬ್ಬೇರ ಬಡಾವಣೆಯಲ್ಲಿ ನಿನ್ನೆ ಸಂಜೆ ನಡೆದಿದೆ.
ಮರೀಯಮ್ ಬೀ(47) ಮೃತಪಟ್ಟ ಮಹಿಳೆ. ಇವರ ಮನೆ ಹಳೇಯದಾಗಿದ್ದು, ಮಳೆ ಕಡಿಮೆಯಾದ ಬಳಿಕ ಮನೆಯ ದುರಸ್ತಿ ಮಾಡಲು ನಿರ್ಧರಿಸಿ ಅದೇ ಮನೆಯಲ್ಲಿ ವಾಸಿಸುತ್ತಿದ್ದರು. ಆದ್ರೆ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಮರೀಯಮ್ ಗಂಭೀರ ಗಾಯಗೊಂಡು ಉಸಿರಾಟದ ತೊಂದರೆ ಅನುಭವಿಸುತ್ತಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಕುರಿತಂತೆ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.