ETV Bharat / state

"ಕೈ" ಬಿಟ್ಟು ಕಮಲ ಹಿಡಿಯುತ್ತಾರಾ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ!? - Former MP virupakshappa

ಕುರುಬ ಸಮುದಾಯd ಪ್ರಮುಖ ಮುಖಂಡರಲ್ಲಿ ಒಬ್ಬರಾಗಿರುವ ಕೆ.ವಿರೂಪಾಕ್ಷಪ್ಪ ಸಿಂಧನೂರು ಭಾಗದಲ್ಲಿ ತಮ್ಮದೇ ವರ್ಚಸ್ಸು​ ಹೊಂದಿದ್ದಾರೆ. ಜತೆಗೆ ಒಂದು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಆದ್ರೆ ಪುನಃ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇದೀಗ ಮತ್ತೆ ಬಿಜೆಪಿ ಕಡೆಗೆ ವಾಲುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Former MP Virupakshappa joins BJP
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ
author img

By

Published : Mar 6, 2021, 12:11 PM IST

ರಾಯಚೂರು : ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿಸಬೇಕೆನ್ನುವ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನಲಾಗುತ್ತಿದೆ.

ಜಿಲ್ಲೆಯ ಸಿಂಧನೂರು ಮೂಲದವರಾದ ಕೆ.ವಿರೂಪಾಕ್ಷಪ್ಪ ಸದ್ಯ ಕಾಂಗ್ರೆಸ್ ನಲ್ಲಿದ್ದು, ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿ ಕಲ್ಪಿಸುವಂತೆ ನಡೆಸುತ್ತಿರುವ ಹೋರಾಟದ ರಾಜ್ಯಾಧ್ಯಕ್ಷರಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಇವರನ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಹಲವು ಮುಖಂಡರು ಕೆ.ವಿರೂಪಾಕ್ಷಪ್ಪನವರನ್ನ ಬಿಜೆಪಿಗೆ ಸೇರ್ಪಡೆಯಾಗುವಂತೆ ಸಂಪರ್ಕಿಸಿದ್ದಾರೆ. ಇವರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀಲ್ ಕುಮಾರ್ ಕಟೀಲ್ ಸಹ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿಗೆ ಬರುವಂತೆ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪಗೆ ನಾಯಕರ ಆಹ್ವಾನ

ಈ ಬಗ್ಗೆ ಕೆ.ವಿರೂಪಾಕ್ಷಪ್ಪ 'ಈಟಿವಿ ಭಾರತ' ಜೊತೆ ಮಾತನಾಡಿದ್ದು, ಬಿಜೆಪಿ ಸೇರ್ಪಡೆಯಾಗುವ ಕುರಿತಂತೆ ಚರ್ಚೆ ನಡೆದಿದೆ. ಬಿಜೆಪಿಯ ಹಲವು ನಾಯಕರು ಪಕ್ಷಕ್ಕೆ ಬರುವಂತೆ ದುಂಬಾಲು ಬಿದ್ದಿದ್ದಾರೆ. ಯುವ ಮುಖಂಡ ಬಿ.ವೈ. ವಿಜಯೇಂದ್ರ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಆಹ್ವಾನಿಸಿದ್ದಾರೆ. ಈ ಬಗ್ಗೆ ತಿರ್ಮಾನ ತೆಗೆದುಕೊಂಡಿಲ್ಲ. ನಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಅಲ್ಲದೇ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆ ಮಾತುಕತೆಯಾಗಿದೆ. ಆದ್ರೆ ನನ್ನ ಕೆಲವೊಂದು ಷರತ್ತುಗಳನ್ನ ಹಾಕಿದ್ದೇನೆ. ಅದನ್ನ ಅವರು ಒಪ್ಪಿದ್ದಾರೆ ಎಂದಿದ್ದಾರೆ.

ಕುರುಬ ಸಮುದಾಯದ ಪ್ರಮುಖ ಮುಂಖಡರಲ್ಲಿ ಒಬ್ಬರಾಗಿರುವ ಕೆ.ವಿರೂಪಾಕ್ಷಪ್ಪ ಸಿಂಧನೂರು ಭಾಗದಲ್ಲಿ ತಮ್ಮದೇ ವರ್ಚಸ್ಸು​ ಹೊಂದಿದ್ದಾರೆ. ಜತೆಗೆ ಒಂದು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಆದ್ರೆ ಪುನಃ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇದೀಗ ಮತ್ತೆ ಬಿಜೆಪಿ ಯುವ ಫೈರ್ ಬ್ರ್ಯಾಂಡ್ ಎಂದೇ ಕರೆಯಲಾಗುತ್ತಿರುವ ಬಿ.ವೈ. ವಿಜಯೇಂದ್ರ, ಕೆ.ವಿರೂಪಾಕ್ಷಪ್ಪನವರನ್ನ ಪಕ್ಷಕ್ಕೆ ಕರೆ ತರಬೇಕು ಎನ್ನುವ ನಿಟ್ಟಿನಲ್ಲಿ ಸಿಂಧನೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಂತಹ ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಭೆಗೆ ಬಂದಾಗ ಅವರ ಮನೆಗೆ ಭೇಟಿ ನೀಡಿ ಆಶ್ಚರ್ಯ ಮೂಡಿಸಿದ್ದರು.

ಓದಿ : ಕೆ.ಸಿ. ಜನರಲ್​​ ಆಸ್ಪತ್ರೆಯಲ್ಲಿ ಕೋವಿಡ್​ ವ್ಯಾಕ್ಸಿನ್​ ಪಡೆದ ಕೇಂದ್ರ ಸಚಿವ ಸದಾನಂದ ಗೌಡ

ಮುಂಬರುವ ದಿನಗಳಲ್ಲಿ ಮಸ್ಕಿ ವಿಧಾನಸಭೆಯ ಬೈ ಎಲೆಕ್ಷನ್ ಎದುರಾಗಲಿದೆ. ಬೈ ಎಲೆಕ್ಷನ್ ನಲ್ಲಿ ಗೆಲ್ಲುವುದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ತಯಾರಿ ನಡೆಸಿವೆ. ಇದರ ಮಧ್ಯೆ ಕುರುಬ ಸಮುದಾಯದ ಮತಗಳನ್ನು ಸೆಳೆಯುವ ತಂತ್ರಗಾರಿಕೆಯಿಂದ ಆ ಸಮುದಾಯದ ಮುಖಂಡರನ್ನ ಪಕ್ಷಕ್ಕೆ ಕರೆ ತರುವ ಮೂಲಕ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಗೆ ವರವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.