ರಾಯಚೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ನೀಡಲು ವಿಳಂಬಿಸುತ್ತಿದೆ ಎಂದು ಆರೋಪಿಸಿ ರಾಯಚೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ಸದಾನಂದ ಗೌಡ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
ನಗರದ ಹೊರವಲಯದ ಕೃಷಿ ವಿವಿಯ ಮುಖ್ಯದ್ವಾರದ ಬಳಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸಚಿವ ಸದಾನಂದ ಗೌಡರು ರಾಯಚೂರಿನಲ್ಲಿ ಕೇಂದ್ರ ನೀತಿ ಆಯೋಗದ ಕಾರ್ಯಾಗಾರದಲ್ಲಿ ಭಾಗವಹಿಸುವ ಕಾರ್ಯಕ್ರಮವಿತ್ತು. ಈ ವೇಳೆ ಕೇಂದ್ರ ವಿಳಂಬ ಧೋರಣೆ ಖಂಡಿಸಿ ಸಚಿವರಿಗೆ ಘೇರಾವ್ ಹಾಕಲು ಕೈ ಕಾರ್ಯಕರ್ತರು ಮುಂದಾಗಿದ್ದಾರೆ.
ಆದ್ರೆ, ಸಚಿವರು ಬರುವ ಮುನ್ನವೇ ಪೊಲೀಸರು ನೂರಾರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯಿಂದಾಗಿ ನಗರದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು.