ರಾಯಚೂರು: ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಖಾಸಗಿ ಜಮೀನಿನಲ್ಲಿ ಕೃಷ್ಣ ನದಿಯ ಒಡಲು ಕೊರೆದು ಅಂದಾಜು 400 ಟ್ರ್ಯಾಕ್ಟರ್ಗಳಲ್ಲಿ ಮರಳನ್ನು ಸಂಗ್ರಹಿಸಿಡಲಾಗಿತ್ತು.
ಖಚಿತ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ 6.60 ಲಕ್ಷ ರೂ. ಮೌಲ್ಯದ ಮರಳು ಜಪ್ತಿ ಮಾಡಿಕೊಂಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.