ಲಿಂಗಸುಗೂರು: ತೆಲಂಗಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಗಡಿ ಜಿಲ್ಲೆಗಳಾದ ರಾಯಚೂರು, ಯಾದಗಿರಿ ಸೀಲ್ಡೌನ್ ಅನುಷ್ಠಾನಗೊಳಿಸಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಮನವಿ ಮಾಡಿದರು.
ರಾಯಚೂರು, ಯಾದಗಿರಿ ಜಿಲ್ಲೆಗಳನ್ನು ಹಸಿರು ವಲಯ ಎಂದು ಗುರುತಿಸಿದ್ದರೂ ಕೂಡ ಏಪ್ರಿಲ್ ಅಂತ್ಯದವರೆಗೆ ಏನನ್ನೂ ಹೇಳಲಾಗದು. ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕರಿಗೆ ಈ ಬಗ್ಗೆ ಪತ್ರ ಬರೆದಿದ್ದು, ಬಡವರಿಗೆ ಪಡಿತರ ಕಿಟ್, ವೈದ್ಯಕೀಯ ಸೇವೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಲಾಗಿದೆ ಎಂದರು.
ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕರಿಗೂ ಪತ್ರ ಬರೆದಿದ್ದು, ಈ ಭಾಗದ ಜನಸಾಮಾನ್ಯರ ಸೇವೆಗೆ ಆರ್ಥಿಕ ಸಹಾಯ ಮಾಡಲು ಕೋರಲಾಗಿದೆ.
ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ಜನರ ಆರೋಗ್ಯ ರಕ್ಷಣೆಗೆ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.