ರಾಯಚೂರು: ಪಾಸ್ ಪಡೆದುಕೊಳ್ಳಲು ಆಗಮಿಸುವ ಜಿಲ್ಲೆ ಹಾಗೂ ಹೊರ ರಾಜ್ಯದ ಜನರಿಗೆ ರಾಯಚೂರು ಜಿಲ್ಲಾಡಳಿತ ವತಿಯಿಂದ ನೆರಳು ಹಾಗೂ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಟೆಂಟ್ ಹಾಕಿ, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
ಪಾಸ್‌ಗಾಗಿ ನಿತ್ಯ ಸಾಕಷ್ಟು ಜನ ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಿದ್ದು, ಎಲ್ಲೆಂದರಲ್ಲಿ ಕುಳಿತುಕೊಳ್ಳುತ್ತಿದ್ದರು. ಈ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರಲಿಲ್ಲ ಎನ್ನುವ ಆರೋಪವಿತ್ತು. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.