ರಾಯಚೂರು: ದೇವದುರ್ಗದ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಅವರು ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಿರುವ ಕರೆಗುಡ್ಡ ಗ್ರಾಮದವರೆಗೆ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆ ಬಲ್ಲಟಗಿ ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಬ್ಯಾಗವಾಟ್ ಗ್ರಾಮದಲ್ಲಿ ಕಾರ್ಯಕರ್ತರ ದಂಡು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಲ್ಲಟಗಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಶಾಲೆ ಆವರಣದಿಂದ ಬಿಜೆಪಿ ಕಾರ್ಯಕರ್ತರು ಹೊರಗೆ ಹೋಗದಂತೆ ಪೊಲೀಸರು ತಡೆಹಿಡಿದಿದ್ದಾರೆ.
ಶಾಸಕರ ಪಾದಯಾತ್ರೆಗೆ ಅಡ್ಡಿಪಡಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.