ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.
ನಗರದ ಹೊರವಲಯದಲ್ಲಿರುವ ರಿಮ್ಸ್ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕ ಮಾದರಿಯಲ್ಲಿನ ಐದು ಬೆಡ್ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರತ್ಯೇಕ ವಾರ್ಡ್ಗಳನ್ನ ಪ್ರಾರಂಭಿಸಲಾಗಿದ್ದು, ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೇ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳು ಹಾಗು ರೋಗಿಗಲಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ರಾಯಚೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ವೈದ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.