ETV Bharat / state

ರಾಜ್ಯದ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಸರ್ಕಾರದಿಂದ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬಿಜೆಪಿ ಸರ್ಕಾರ ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

kn_rcr_04_minister_shashikala_joole_ka10035
ಸಚಿವೆ ಶಶಿಕಲಾ ಜೊಲ್ಲೆ
author img

By

Published : Aug 9, 2022, 9:38 PM IST

ರಾಯಚೂರು: ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಛತ್ರದ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಕೋರಿ ಉತ್ತರಪ್ರದೇಶದ ಅಧಿಕಾರಿಗಳೊಂದಿಗೆ ಪತ್ರವ್ಯವಹಾರ ನಡೆಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಉತ್ತರಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು.

ಕೆಲವು ದಿನಗಳ ಹಿಂದೆ ಕೇರಳ ರಾಜ್ಯದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕಾಗಿ 5 ಕೋಟಿ, ಮಹಾರಾಷ್ಟ್ರ ರಾಜ್ಯದ ಪಂಡರಾಪುರದಲ್ಲಿ ಛತ್ರಕ್ಕಾಗಿ 3 ಕೋಟಿ ಮಂತ್ರಾಲಯದಲ್ಲಿ ಛತ್ರಗಳ ಅಭಿವೃದ್ದಿಗಾಗಿ 4 ಕೋಟಿ ರೂಪಾಯಿ ನೀಡಲಾಗಿದೆ. ಈ ಹಿಂದೆ ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂಪಾಯಿಗಳ ಬೃಹತ್‌ ಅನುದಾನ ನೀಡಲಾಗಿದ್ದು ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ಹೇಳಿದರು.

ಮಂತ್ರಾಲಯದಲ್ಲಿ 4 ಕೋಟಿ ವಚ್ಚದಲ್ಲಿ ಕರ್ನಾಟಕ ಛತ್ರ : ಮಂತ್ರಾಲಯದಲ್ಲಿ 4 ಕೋಟಿ ರೂಪಾಯಿಗಳ ಅನುದಾನದಲ್ಲಿ 0.5 ಗುಂಟೆಯಲ್ಲಿ 50 ಕೊಠಡಿಗಳ ಕರ್ನಾಟಕ ಛತ್ರ ನಿರ್ಮಾಣವಾಗಿದೆ. 40 ಡಿಲಕ್ಸ್‌ ಹಾಗೂ 10 ವಿಐಪಿ ಕೊಠಡಿಗಳಿದ್ದು, ಮುಜರಾಯಿ ಇಲಾಖೆಯ ವತಿಯಿಂದ ನೀಡಲಾಗಿರುವ 54 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಪಿಠೋಪಕರಣಗಳನ್ನು ಒದಗಿಸಲಾಗಿದೆ. ಛತ್ರಗಳ ಅಭಿವೃದ್ದಿಗೆ ಜುಲೈ 23, 2022 ರಂದು 4 ಕೋಟಿ ರೂಪಾಯಿಗಳ ಹೆಚ್ಚುವರಿ ಅನುದಾನ ಒದಗಿಸಲಾಗಿದ್ದು, ಸದ್ಯದಲ್ಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಇದೆ ವೇಳೆ ಮಾತ‌ನಾಡಿದ ಶ್ರೀ ಸುಬುಧೇಂದ್ರ ತೀರ್ಥರು, ಕರ್ನಾಟಕ ರಾಜ್ಯದಿಂದಲೇ ಅತಿ ಹೆಚ್ಚು ಯಾತ್ರಾರ್ಥಿಗಳು ಆಗಮಿಸುವ ಮಂತ್ರಾಲಯಕ್ಕೆ ಕರ್ನಾಟಕ ಸರಕಾರ ಬಹಳಷ್ಟು ಸಹಕಾರ ನೀಡಿದೆ. 30 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಕರ್ನಾಟಕ ಛತ್ರ ಶಿಥಿಲವಾಗಿತ್ತು. ಇದನ್ನು ಮನಗೊಂಡ ಕರ್ನಾಟಕ ಸರ್ಕಾರ 4 ಕೋಟಿ ರೂಪಾಯಿಗಳ ವೆಚ್ಚದಲ್ಲಿ 50 ಕೊಠಡಿಗಳ ನೂತನ ಛತ್ರವನ್ನು ನಿರ್ಮಿಸಿದೆ. ಈ ಬಾರಿಯ ರಾಯರ ಆರಾಧನೆಯ ಸಂಧರ್ಭದಲ್ಲಿ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು, ನೂತನ ಕಟ್ಟಡದಿಂದ ಬಹಳಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ, ಮಂತ್ರಾಲಯ ಕರ್ನಾಟಕ ಛತ್ರದ ವ್ಯವಸ್ಥಾಪಕಿ ತ್ರಿವೇಣಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.