ರಾಯಚೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹುಟ್ಟುಹಬ್ಬವನ್ನು ಮಂತ್ರಾಲಯದ ರಾಯರ ಸನ್ನಿಧಿಯಲ್ಲಿ ಮನ್ಸಲಾಪುರ ಗ್ರಾಮದ ಶಿವಣ್ಣ ಅಭಿಮಾನಿ ಬಳಗದವರು ಆಚರಿಸಿದ್ರು.
ರಾಯಚೂರು ತಾಲೂಕಿನ ಮನ್ಸಲಾಪುರ ಗ್ರಾಮದ ಶಿವಣ್ಣ ಅಭಿಮಾನಿ ಬಳಗ, ಶ್ರೀರಾಘವೇಂದ್ರ ಸ್ವಾಮಿ ಸನ್ನಿಧಾನಕ್ಕೆ ತೆರಳಿ ವಿಶೇಷ ಪೂಜೆ ಮತ್ತು ಬಡ ಜನರಿಗೆ ಹಣ್ಣು-ಹಂಪಲು ವಿತರಣೆ ಮಾಡುವ ಮೂಲಕ ಆಚರಿಸಿದ್ರು. ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಣ್ಣ ಆದಷ್ಟು ಬೇಗ ಗುಣಮುಖವಾಗಲಿ ಎಂದು ಅಭಿಮಾನಿಗಳು ಬೇಡಿಕೊಂಡರು.