ರಾಯಚೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಾಯಚೂರಿನಲ್ಲಿ ಭಾರತ ಐಕ್ಯತಾ ಯಾತ್ರೆ ಪೂರ್ವಭಾವಿ ಸಭೆ ಹಿನ್ನೆಲೆ ಅಳವಡಿಸಿರುವ ಬ್ಯಾನರ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಕೈಬಿಡಲಾಗಿದೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಾಲಿ, ಮಾಜಿ, ಪದಾಧಿಕಾರಿಗಳು, ಮುಖಂಡರೊಂದಿಗೆ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ. ಸಭೆ ಹಿನ್ನೆಲೆ ಜಿಲ್ಲಾ ಸಮಿತಿಯಿಂದ ಬ್ಯಾನರ್ ತಯಾರಿಸಿ ಕಚೇರಿಯೊಳಗೆ ಅಳವಡಿಸಲಾಗಿದೆ.
ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರಖಂಡ್ರೆ, ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್, ಎಐಸಿಸಿ ಕಾರ್ಯಾಧ್ಯಕ್ಷ ಎನ್.ಎಸ್.ಬೋಸರಾಜ್ ಹಾಗೂ ಹಾಲಿ, ಮಾಜಿ ಶಾಸಕರು, ಜಿಲ್ಲೆಯ ಕೆಲ ಪ್ರಮುಖ ಮುಖಂಡರ ಭಾವಚಿತ್ರವನ್ನು ಹಾಕಲಾಗಿದೆ. ಆದರೆ ಮುಖ್ಯವಾಗಿ ಮಾಜಿ ಸಿದ್ದರಾಮಯ್ಯನವರ ಫೋಟೋ ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಸಾರಥ್ಯದಲ್ಲಿ 3ನೇ ದಿನಕ್ಕೆ ಕಾಲಿಟ್ಟ 'ಭಾರತ್ ಜೋಡೋ ಯಾತ್ರೆ'