ರಾಯಚೂರು: ಅಂಕಲಿಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಸ್ವಾಮಿಗಳ ಪುತ್ರ ಬಸವರಾಜಸ್ವಾಮಿ ಮದುವೆ ಸಮಾರಂಭ ನಿಮಿತ್ತ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿ ಆಶೀರ್ವಾದ ಪಡೆದರು.
ಡಿ-24ರಂದು ವಿವಾಹ ಮಹೋತ್ಸವ ಜರುಗಲಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಇಂದು ಹೆಲಿಕಾಪ್ಟರ್ ಮೂಲಕ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಅಂಕಲಿಮಠಕ್ಕೆ ಆಗಮಿಸಿ ಶ್ರೀಗಳಿಂದ ಆಶೀರ್ವಾದ ಪಡೆದು ಮದುಮಗನಿಗೆ ಶುಭ ಹಾರೈಸಿದರು.
ಸಿದ್ಧರಾಮಯ್ಯ ಆಗಮನ ಸುದ್ದಿ ತಿಳಿಯುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಭಾಷಣ ಮಾಡಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಹಾಗೆಯೇ ವಾಪಸ್ ಆದರು.