ರಾಯಚೂರು: ತುಂಗಭದ್ರಾ ಎಡದಂಡೆ ನಾಲೆಯ ಕೆಳ ಭಾಗದ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ರಾಯಚೂರು-ಲಿಂಗಸೂಗೂರು ಮಾರ್ಗ ರಸ್ತೆಯನ್ನ ತಡೆದು ರೈತರು ಹೋರಾಟ ನಡೆಸುತ್ತಿದ್ದಾರೆ. ತುಂಗಭದ್ರಾ ನೀರಾವರಿ ಸಲಹಾ ಸಮಿತಿಯಲ್ಲಿ ತಿರ್ಮಾನಿಸಿದಂತೆ ಕೆಳಭಾಗದ ರೈತರಿಗೆ ನೀರು ಹರಿಸಬೇಕು. ಆದರೆ ನೀರಾವರಿ ಇಲಾಖೆಯ ಅಧಿಕಾರಿಗಳು ಮೇಲ್ಭಾಗದ ರೈತರಿಗೆ ಮಾತ್ರ ನೀರು ಹರಿಸಿ ಕೆಳ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ದೂರಿದ್ದಾರೆ.
ಇನ್ನೂ ಆರಂಭದಲ್ಲಿ ರೈತರು ನಾಲೆ ನೀರಿಗಾಗಿ ಒತ್ತಾಯಿ ನೀರಾವರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ, ಸಮಸ್ಯೆಯನ್ನ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ನಂತರ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿದಾಗ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ತಡೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ.