ರಾಯಚೂರು: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಗೆ ಹಾವು ಕಚ್ಚಿ ಮೃತಪ್ಟಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕು ಬಯ್ಯಾಪುರ ಗ್ರಾಮದಲ್ಲಿ ನಡೆದಿದೆ.
ಸೋಮವ್ವ ತುಂಬಲಗಡ್ಡಿ ಮೃತ ಮಹಿಳೆ. 2 ದಿನಗಳ ಹಿಂದೆ ಸಜ್ಜೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ಜರುಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತಳ ಮಗ ಮಲ್ಲಪ್ಪ ತುಂಬಲಗಡ್ಡಿ ಮುದಗಲ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಿಎಸ್ಐ ಡಾಕೇಶ್. ಯು ತನಿಖೆ ಮುಂದುವರೆಸಿದ್ದಾರೆ.