ರಾಯಚೂರು: ಅಗತ್ಯ ಸೇವೆಗಳನ್ನ ಒದಗಿಸುವವರಿಗೆ ಹಾಗೂ ಪೂರೈಕೆದಾರರಿಗೆ ಜಿಲ್ಲಾಡಳಿತದಿಂದ ಪಾಸ್ ವಿತರಣೆ ಮಾಡಲಾಗುತ್ತಿದೆ. ಆದ್ರೆ ಈ ಪಾಸ್ ತೆಗೆದುಕೊಳ್ಳಲು ಬರುವವರು ಸಾಮಾಜಿಕ ಅಂತರವನ್ನು ಪಾಲಿಸುತ್ತಿಲ್ಲ. ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳದೇ ಪಾಸ್ ವಿತರಣೆ ಮಾಡುತ್ತಿದ್ದಾರೆ.
ಕೊರೊನಾ ವೈರಸ್ ಹರಡಬಾರದೆಂದು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಸರ್ಕಾರ ಆದೇಶಿಸಿದೆ. ಆದ್ರೆ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತ್ರ ಈ ನಿಯಮ ಉಲ್ಲಂಘನೆಯಾಗುತ್ತಿದೆ.
ಪಾಸ್ಅನ್ನು ಜನ ಗುಂಪು ಗುಂಪಾಗಿ ಬಂದು ತೆಗೆದುಕೊಂಡು ಹೋಗುತ್ತಿದ್ದಾರೆ. ಇದನ್ನು ಅಧಿಕಾರಿಗಳು ಕಂಡೂ ಕಾಣದಂತೆ ವಿತರಣೆ ಮಾಡುತ್ತಿದ್ದಾರೆ. ಇದನ್ನ ಚಿತ್ರೀಕರಿಸಲು ಹೋದಾಗ ಪಾಸ್ ವಿತರಣೆ ಮಾಡುವ ಸಿಬ್ಬಂದಿ ಕಾಟಾಚಾರಕ್ಕೆ ಎಂಬಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುತ್ತಿರುವುದು ಕಂಡು ಬಂತು.