ರಾಯಚೂರು : ಮಾವನ ತಲೆಗೆ ಅಳಿಯನೇ ಬಲವಾಗಿ ಹೊಡೆಯುವ ಮೂಲಕ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.
ಇದನ್ನೂ ಓದಿ: ಅಥಣಿ : ಪ್ರೌಢ ಶಾಲೆಗೆ ವಾಮಾಚಾರ ಮಾಡಿದ ದುರುಳರು!
ನಾಗರಾಜ (30) ಕೊಲೆಯಾದ ವ್ಯಕ್ತಿ. ಅಳಿಯ ಮೌನೇಶ್ ಕೊಲೆಗೈದ ಆರೋಪಿ. ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ. ಮುದಗಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.