ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಏನಾದರೂ ನಡೆದರೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಿದಾಗ ಗ್ರಾಮೀಣ ಶಾಸಕ ದದ್ದಲ್ ಬಸವನಗೌಡ ಮಾತನಾಡಿ, ಓವರ್ ಲೋಡ್ ಹಾಕಿಕೊಂಡು ಮರಳು ಸಾಗಿಸುವವರ ಮೇಲೆ ಕ್ರಮ ಜರುಗಿಸುತ್ತಿಲ್ಲ. ಅಕ್ರಮ ಮರಳುಗಾರಿಕೆಯಲ್ಲಿ ಶಾಸಕರು ಶಾಮೀಲಾಗಿದ್ದಾರೆ ಎಂಬ ಆರೋಪವಿದೆ ಎಂದರು.
ಇದಕ್ಕೆ ಉತ್ತರಿಸಿದ ಸವದಿ, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಇರುವವರೆಗೆ ಯಾವುದೇ ಅಕ್ರಮ ಚಟುವಟಿಕೆ ಅವಕಾಶವಿರುವುದಿಲ್ಲ. ಅಂತಹ ಪ್ರಕರಣಗಳು ಬೆಳಕಿಗೆ ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.