ರಾಯಚೂರು: ಜಿಲ್ಲೆಯಲ್ಲಿ ಪೊಲೀಸರು ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರ ಮನೆ ಹಾಗೂ ಕಚೇರಿ ದಾಳಿ ನಡೆಸಿದ್ದಾರೆ. ದಾಳಿ ಭಾಗವಾಗಿ ಪಿಎಫ್ಐ ಮಾಜಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಪಿಎಫ್‌ಐ ಸಂಘಟನೆ ಮಾಜಿ ಅಧ್ಯಕ್ಷ ಮಹಮದ್ ಇಸ್ಮಾಯಿಲ್ ಹಾಗೂ ಕಾರ್ಯದರ್ಶಿ ಆಸೀಂ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ರಾಯಚೂರು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ನೇತೃತ್ವದ ತಂಡದಿಂದ ದಾಳಿ ನಡೆದಿದ್ದು, ಪಿಎಫ್ಐ ಕಾರ್ಯಕರ್ತರನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಇತ್ತೀಚೆಗೆ ಶಿವಮೊಗ್ಗ ಹಾಗೂ ಮಂಗಳೂರು ಸೇರಿದಂತೆ ನಾನಾ ಕಡೆಗಳಲ್ಲಿ ಉಗ್ರರ ನಂಟು ಹೊಂದಿದ್ದ ಆರೋಪದ ಮೇಲೆ ಎನ್‌ಐಎ ತಂಡ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಅದರ ಬೆನ್ನಲ್ಲೇ ಇಂದು ಪೊಲೀಸರು ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಓದಿ: ಮಂಗಳೂರಿನಲ್ಲೂ ಪೊಲೀಸರ ಕಾರ್ಯಾಚರಣೆ.. ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿ 14ಕ್ಕೂ ಹೆಚ್ಚು ಮುಖಂಡರು ವಶಕ್ಕೆ