ರಾಯಚೂರು: ಕೋವಿಡ್ 19 ಸಾಂಕ್ರಾಮಿಕ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಇಂದು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ಆದೇಶ ಪಾಲಿಸಲಾಗಿದೆ.
ನಗರದ ಅಗತ್ಯ ವಸ್ತುಗಳು, ತುರ್ತು ಸೇವೆಗಳು ಹೊರತು ಪಡಿಸಿದರೆ ಉಳಿದೆಲ್ಲ ಸೇವೆಗಳನ್ನ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ನಗರದ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು.
ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಸಾರಿಗೆ ಸೇವೆ ಸ್ಥಗಿತಗೊಂಡಿದ್ದು, ಬಸ್ ನಿಲ್ದಾಣ ಸಹ ಬಣಗುಡುತ್ತಿದೆ. ಮಾಂಸದಂಗಡಿಗಳು ತೆರೆದಿದ್ದು, ಮಾಂಸ ಪ್ರಿಯರು ಬೆಳಗ್ಗಿನಿಂದ ಖರೀದಿಯಲ್ಲಿ ತೊಡಗಿಕೊಂಡಿರುವ ದೃಶ್ಯ ಕಂಡು ಬಂತು.
ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಾಗಿದ್ದು, ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರು.