ರಾಯಚೂರು: ನಗರದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ನೂರಾರು ವಿದ್ಯಾರ್ಥಿಗಳು ಕ್ಯಾಂಡಲ್ ಹಚ್ಚುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ನಗರದ ತೀನ್ ಖಂದಿಲ್ ವೃತ್ತದಲ್ಲಿ ನೂರಾರು ವಿದ್ಯಾರ್ಥಿಗಳು ಕ್ಯಾಂಡಲ್ ಹಚ್ಚುನ ಮೂಲಕ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯ ಆತ್ಶಕ್ಕೆ ಶಾಂತಿ ಸಿಗಲೆಂದು ಶ್ರದ್ಧಾಂಜಲಿ ಸಲ್ಲಿಸಿದರು. ವಿದ್ಯಾರ್ಥಿನಿಯ ಶವ ಮರಕ್ಕೆ ನೇಣು ಹಾಕಿಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವದ ಪಕ್ಕದಲ್ಲಿ ಡೆತ್ ನೋಟ್ ಇದ್ದು, ಇದರ ಪ್ರಕಾರ ಪರೀಕ್ಷೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವೆ ಎಂಬುವುದಾಗಿ ಹೇಳಲಾಗಿತ್ತು. ಆದರೆ ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಆರೋಪಿಸಿ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಿಷಯ ತಿಳಿದು ಸ್ಥಳೀಯ ಸದರ್ ಬಜಾರ್ ಪೋಲಿಸ್ ಠಾಣೆಯ ಪಿಎಸ್ಐ ಉಮೇಶ್ ಕಾಂಬ್ಳೆ ನೇತೃತ್ವದಲ್ಲಿ ಸಿಬ್ಬಂದಿ ಆಗಮಿಸಿ ಏಕಾಏಕಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆ ಮಾಡಿದರೆ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಇತರೆ ವೃತ್ತದಲ್ಲಿ ಮಾಡಿ ಎಂದು ಮನ ಒಲಿಸಿ ಶಾಂತಿಯುತವಾಗಿ ಶ್ರದ್ಧಾಂಜಲಿ ಸಲ್ಲಿಸಲು ತಿಳಿಸಿದರು. ಮಧು ಅವರದ್ದು ಕೊಲೆ. ಆತ್ಮಹತ್ಯೆಯಲ್ಲ. ಉದ್ದೇಶ ಪೂರ್ವಕವಾಗಿ ಕೊಲೆ ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿ ಶೀಘ್ರವೇ ತನಿಖೆ ಚುರುಕುಗೊಳಿಸಿ ಆರೋಪಿಗಳ ಬಂಧನ ಮಾಡಿ, ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.