ರಾಯಚೂರು: ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲೆಯ ಮಸ್ಕಿ ತಾಲೂಕಿನ ಕೊಂಬಾಳ ಗ್ರಾಮದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕೋವಿಡ್ ಕಾರಣದಿಂದಾಗಿ ಕಳೆದ 10 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೂಕ್ತ ಬಸ್ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದೆ. ಸಿಂಧನೂರಿನಿಂದ ನಂಜಲದಿನ್ನಿ ಗ್ರಾಮಕ್ಕೆ ನಿತ್ಯ ಒಂದು ಸಾರಿಗೆ ಬಸ್ ಸಂಚರಿಸುತ್ತದೆ. 13 ಹಳ್ಳಿಗಳ ಮಾರ್ಗವಾಗಿ ಬರುವ ಈ ಬಸ್ನಲ್ಲಿಯೇ ನೂರಾರು ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಾರೆ. ಒಂದೊಂದು ದಿನ ಈ ಬಸ್ನಲ್ಲೂ ಜಾಗವಿಲ್ಲದೇ, ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಓದಿ: ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ... ದ್ವಿವೇದಿಗೆ ಜೈಲೇ ಗತಿ!
ಬಸ್ ವ್ಯವಸ್ಥೆ ಕಲ್ಪಿಸುವಂತೆ ಹಲವಾರು ಬಾರಿ ವಿದ್ಯಾರ್ಥಿಗಳು ಮನವಿ ಮಾಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ, ಇಂದು ಕೊಂಬಾಳ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ.