ರಾಯಚೂರು: ಜಿಲ್ಲೆಯಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಕೆಲಕಡೆ ಜನಜೀವನ ಅಸ್ತವ್ಯಸ್ತವಾಗಿದ್ರೆ, ಮತ್ತೊಂದು ಕಡೆ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ನೀರು ಸಂಗ್ರಹವಾಗಿ ವಿದ್ಯಾರ್ಥಿಗಳು ಪರದಾಡುವಂತೆ ಮಾಡಿದೆ.
ಜಿಲ್ಲೆಯ ಮಾನ್ವಿ ತಾಲೂಕಿನ ತೋಪ್ಪಲದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಳೆ ನೀರು ಸಂಗ್ರಹವಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ನಿಂತ ನೀರಿನ್ನ ವಿದ್ಯಾರ್ಥಿಗಳೇ ಪ್ಲಾಸ್ಟಿಕ್ ಬುಟ್ಟಿಗಳಿಂದ ತೆಗೆದು ಹಾಕಯತ್ತಿರುವ ದೃಶ್ಯ ಕಂಡು ಬಂತು.
ಇನ್ನು ಶಾಲೆಗಳು ಪ್ರಾರಂಭವಾಗುವ ಮುನ್ನವೇ ಸಂಬಂಧಿಸಿದ ಶಿಕ್ಷಣ ಇಲಾಖೆ ಶಾಲೆಗಳಲ್ಲಿ ಮಕ್ಕಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ.