ರಾಯಚೂರು: ವಿಷ ಸೇವಿಸಿ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಳಿ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮಸ್ಕಿ ಮೂಲದ ಬಸಗುಂಡಪ್ಪ ಬಸಗುಂಡಪ್ಪ ಹಡಪದ(51) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಗ್ಗೆ ಲಿಂಗಸೂಗೂರು ಪಟ್ಟಣದ ಬಸ್ ನಿಲ್ದಾಣದ ಬಳಿ ಶಿಕ್ಷಕನ ಮೃತದೇಹ ಪತ್ತೆಯಾಗಿದ್ದು, ಪಕ್ಕದಲ್ಲಿ ವಿಷದ ಬಾಟಲಿ ದೊರೆತಿದೆ.
ಬಸಗುಂಡಪ್ಪ ಹಡಪದ ಮಸ್ಕಿಯ ಕೇಂದ್ರೀಯ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ರು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಲಿಂಗಸೂಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.