ರಾಯಚೂರು: ಮನೆಯಲ್ಲಿ ಶಿಕ್ಷಕಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾನವಿ ಪಟ್ಟಣದಲ್ಲಿ ನಡೆದಿದೆ.
ಮಾನವಿ ಪಟ್ಟಣದಲ್ಲಿನ 4ನೇ ವಾರ್ಡ್ನ ನಿವಾಸಿ ಶಾಲಿನಿ ಮೋಹನ್ (33) ಮೃತ ಶಿಕ್ಷಕಿ. ಇವರು ಮೂಲತಃ ತುಮಕೂರು ಮೂಲದವರು ಎಂದು ಹೇಳಲಾಗುತ್ತಿದೆ. ಶಾಲಿನ ಮಾನವಿ ತಾಲೂಕಿನ ನಸಲಾಪುರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶಿಕ್ಷಕಿ ಡೆತ್ ನೋಟ್ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಲಿನಿ ಅವರ ಪತಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಾನವಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಘಟನೆ ಕಾರಣ ತಿಳಿದು ಬರಲಿದೆ.