ರಾಯಚೂರು: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಅವಶ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನ ಒದಗಿಸುವಂತೆ ಜಿಲ್ಲಾ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.
ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಒತ್ತಾಯಿಸಿದ ಕಾಂಗ್ರೆಸ್ ಮುಖಂಡರು, ಸೋಂಕಿನ ತಡೆಗೆ ಬೇಕಾಗಿರುವ ವೈದ್ಯಕೀಯ ಸಾಮಗ್ರಿಗಳಾದ ಮಾಸ್ಕ್, ಸ್ಯಾನಿಟೈಸರ್, ಟೆಸ್ಟಿಂಗ್ ಕಿಟ್ಸ್ ಕೊಡುವಂತೆ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯ ಕೊರತೆ ಎದ್ದು ಕಾಣುತ್ತಿದೆ. ನೆರೆಯ ರಾಜ್ಯ ತೆಲಂಗಾಣ ಹಾಗೂ, ಆಂಧ್ರಕ್ಕೆ ಹೊಂದಿಕೊಂಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಪರೀಕ್ಷೆ ಮಾಡಲು ಪ್ರಯೋಗಾಲಯ ತುರ್ತಾಗಿ ಸ್ಥಾಪಿಸುವಂತೆ ಒತ್ತಾಯಿಸಲಾಗಿದೆ.
ಈ ವೇಳೆ ಜಿಲ್ಲಾ ಕ್ರಾಂಗೆಸ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಎನ್.ಎಸ್. ಬೋಸರಾಜ್, ಜಿಲ್ಲಾಧ್ಯಕ್ಷ ಬಿ.ವಿ. ನಾಯಕ, ಶಾಸಕರಾದ ಬಸವನಗೌಡ ದದ್ದಲ್, ಡಿ.ಎಸ್. ಹೊಲಗೇರಿ, ಬಸವರಾಜ ಪಾಟೀಲ್ ಇಟಗಿ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಹಂಪಯ್ಯ ನಾಯಕ, ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಉಪಸ್ಥಿತರಿದ್ದರು.