ETV Bharat / state

ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಕೊರೊನಾ ಲಸಿಕೆ ಲಭ್ಯ: ಡಿಹೆಚ್ಓ ಡಾ‌. ರಾಮಕೃಷ್ಣ

author img

By

Published : Jan 6, 2021, 10:10 AM IST

ರಾಯಚೂರು ಜಿಲ್ಲೆಗೆ ಕೊರೊನಾ ಲಸಿಕೆ ಈ ತಿಂಗಳ ಅಂತ್ಯಕ್ಕೆ ಸಿಗಲಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ತಿಳಿಸಿದರು.

raichur
ಡಿಹೆಚ್ಓ ಡಾ‌.ರಾಮಕೃಷ್ಣ

ರಾಯಚೂರು: ಈ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಕೊರೊನಾ ಲಸಿಕೆ ಲಭ್ಯವಾಗಲಿದ್ದು, ಲಸಿಕೆ ಸಂಗ್ರಹಕ್ಕೆ ಆರೋಗ್ಯ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ತಿಳಿಸಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ

ನಗರದ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಸಾ) ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಲಸಿಕೆ ಈ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಲಭ್ಯವಾಗಲಿದ್ದು, ಅದರ ಸಂಗ್ರಹಕ್ಕೆ ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಯನ್ನು ಆರೋಗ್ಯ ಇಲಾಖೆ ಮಾಡಿಕೊಂಡಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಲಸಿಕೆಯನ್ನು ಪ್ರತಿ ದಿನ ನೂರು ಜನರಿಗೆ ನೀಡಲು ಅಗತ್ಯ ಸೌಕರ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದ್ದು, ಸರ್ಕಾರಿ ಶಾಲೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂರು ಕೋಣೆಗಳನ್ನು ಗುರುತಿಸಲಾಗಿದೆ. ಒಂದು ಕೋಣೆಯಲ್ಲಿ ನೋಂದಣಿ, ಒಂದು ಕೋಣೆಯಲ್ಲಿ ಲಸಿಕೆ, ಒಂದು ಕೋಣೆಯಲ್ಲಿ ವಿಶ್ರಾಂತಿಗೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾಡಳಿತದ ಸೂಚನೆಯ ಮೇರೆಗೆ ಲಸಿಕೆಯನ್ನು ಪ್ರಪ್ರಥಮವಾಗಿ ಆರೋಗ್ಯ ಕಾರ್ಯಕರ್ತರಿಗೆ ನೀಡಲು ತೀರ್ಮಾನಿಸಿದ್ದು, ಖಾಸಗಿ ಹಾಗೂ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಸುಮಾರು 14 ಸಾವಿರ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೂ 2,36,654 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಅದರಲ್ಲಿ 14,173 ಪ್ರಕರಣಗಳು ದೃಢಪಟ್ಟಿದ್ದು, 2,19,003 ಜನರ ವರದಿ ನೆಗೆಟಿವ್ ಬಂದಿದೆ.

ಓದಿ: ದೋಸೆ, ಚಟ್ನಿಯಲ್ಲಿ ವಿಷ ಬೆರೆಸಿ ನನ್ನ ಹತ್ಯೆಗೆ ಸಂಚು: ಇಸ್ರೋದ ಉನ್ನತ ವಿಜ್ಞಾನಿ ಗಂಭೀರ ಆರೋಪ!

ಇನ್ನು 13,982 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 158 ಜನರು ಕೊರೊನಾದಿಂದ ಮೃತಪಟ್ಟಿದ್ದು, ಇಂದಿನವರೆಗೆ 38 ಸಕ್ರಿಯ ಪ್ರಕಣಗಳಿವೆ, ಬ್ರಿಟನ್​ನಿಂದ ಬಂದ 15 ಜನರ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಹದಿನೈದು ದಿನಗಳ ವರೆಗೆ ಹೋಂ ಕ್ವಾರಂಟೈನ್​ ಮಾಡಲಾಗಿದೆ ಎಂದು ಡಾ. ರಾಮಕೃಷ್ಣ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.