ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜಲದುರ್ಗ ಸೇತುವೆ ಬಿರುಕು ಬಿಟ್ಟಿದೆ. ಈ ಸೇತುವೆ ನಾನಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಜಲದುರ್ಗ ಸೇರಿದಂತೆ ನಾನಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವಂತಹ ಸೇತುವೆಯಾಗಿದೆ. ನಾರಾಯಣಪುರ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿದು ಬಿಟ್ಟ ಪರಿಣಾಮ ಸೇತುವೆ ಮುಳುಗಡೆಯಾಗಿ ಅಪಾಯದ ಮಟ್ಟ ಮೀರಿ ನೀರು ಹರಿದಿತ್ತು.
ಇದರಿಂದ ಸೇತುವೆ ಪಕ್ಕಕ್ಕೆ ನಿರ್ಮಾಣ ಮಾಡಿದ ತಡೆಗೋಡೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿತ್ತು. ಇದೀಗ ಸೇತುವೆ ಡ್ಯಾಮೇಜ್ ಆಗಿರುವುದು ಕಂಡು ಬಂದಿದೆ. ಹೀಗಾಗಿ ವಾಹನಗಳ ಓಡಾಟಕ್ಕೆ ನಿಷೇಧ ಹೇರಲಾಗಿದೆ.
ಈ ಬಗ್ಗೆ ಲಿಂಗಸೂಗೂರು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಸ್ಥಳ ಪರಿಶೀಲಿಸಿದ್ದು, ಲೋಕೋಪಯೋಗಿ ಇಲಾಖೆ ತಾತ್ಕಾಲಿಕವಾಗಿ ವಾಹನ ಓಡಾಟಕ್ಕೆ ನಿಷೇಧ ಹೇರಿದೆ.