ರಾಯಚೂರು: ಜಿಲ್ಲೆಯಾದ್ಯಂತ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಯಿತು.
ನಗರದ ಜಿಲ್ಲಾ ಪೊಲೀಸ್ ಡಿ.ಆರ್. ಮೈದಾನದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಗೌರವ ವಂದನೆ ಸ್ವೀಕರಿಸಿದರು. ಪೊಲೀಸರ ಸಶಸ್ತ್ರ ಮೀಸಲು ಪಡೆ, ಹೋಮ್‌ಗಾರ್ಡ್, ನಾನಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಇನ್ನು ಇದುವರೆಗೆ ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಬದಲಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. ಈ ವೇಳೆ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದರು.
ಇದಕ್ಕೂ ಮುನ್ನ ಪಟೇಲ್ ಸರ್ಕಲ್ಗೆ ತೆರಳಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಭಾವಚಿತ್ರಕ್ಕೆ ಪೂಜೆ ಮಾಡಿ, ಬಳಿಕ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಸಾಥ್ ನೀಡಿದರು.