ರಾಯಚೂರು: ರಾಜ್ಯದಲ್ಲಿ ಉಂಟಾದ ಪ್ರವಾಹದ ಪರಿಣಾಮ ಅಪಾರ ಪ್ರಮಾಣದ ಬೆಳೆ, ರಸ್ತೆ, ಸೇತುವೆಗಳು ನಾಶವಾಗಿದ್ದು, ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಕೊಚ್ಚಿ ಹೋಗಿದೆ.
ಕೃಷ್ಣಾ ನದಿಯಿಂದ ಆದ ಪ್ರವಾಹದಿಂದ ಈ ಸೇತುವೆ ಕೊಚ್ಚಿ ಹೋಗಿದೆ. ನಾರಾಯಣಪುರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಿದ್ದರಿಂದ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿತ್ತು. ಪ್ರಸ್ತುತ ಕೃಷ್ಣಾ ನದಿಯಲ್ಲಿ ಪ್ರವಾಹ ತಗ್ಗಿದ್ದು, ಶೀಲಹಳ್ಳಿ ಸೇತುವೆ ಸಂಪೂರ್ಣ ಹಾಳಾಗಿರುವುದು ಬೆಳಕಿಗೆ ಬಂದಿದೆ.