ರಾಯಚೂರು: ಐತಿಹಾಸಿಕ ಕಾಸಬಾವಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗಂಗಾನಿವಾಸದ ನಿವಾಸಿ ಬಾಬು ಮೃತ ವ್ಯಕ್ತಿಯೆಂದು ಹೇಳಲಾಗುತ್ತಿದೆ. ನಿನ್ನೆ ಸಂಜೆ ವೇಳೆ ನಗರದ ಮಾವಿನಕರೆಯ ಬಳಿ ಬರುವ ಕಾಸಬಾವಿಗೆ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ವ್ಯಕ್ತಿ ಬಾವಿಗೆ ಹಾರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತ ದೇಹ ಇನ್ನು ಪತ್ತೆಯಾಗದ ಕಾರಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಜಲು ತೆರಳಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.