ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವನ ಹೆಣ ಉರುಳಿದೆ. ಈ ಗಲಾಟೆಯಲ್ಲಿ ವ್ಯಕ್ತಿವೋರ್ವನಿಗೆ ಚಾಕುವಿನಿಂದ ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಶಾವಂತಗಲ್ಲ ಗ್ರಾಮದಲ್ಲಿ ನಡೆದಿದೆ.
ಅಂಬರೇಶ್ ಗವಿಗಟ್(29) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ನಿನ್ನೆ ದೇವದುರ್ಗ ತಾಲೂಕಿನ ಶಾವಂತಗಲ್ಲ ಗ್ರಾಮದಲ್ಲಿ, ಮಾರೆಮ್ಮ ದೇವಿಯ ದೇವರು ಮಾಡುವ ಕಾರ್ಯಕ್ರಮಕ್ಕಾಗಿ ಮಾನವಿ ತಾಲೂಕಿನ ಗವಿಗಟ್ಟ ಗ್ರಾಮದಿಂದ, ಶಾವಂತಗಲ್ಲಗೆ ಬರುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿದೆ. ಗಲಾಟೆಯಲ್ಲಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಮೂರ್ನಾಲ್ಕು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.