ರಾಯಚೂರಿನ: ಬೆಳೆ ಪರಿಹಾರ, ನೆರೆ ಹಾವಳಿಯಿಂದ ಹಾನಿಯಾದ ಬಗ್ಗೆ ಕುಲಂಕುಶವಾಗಿ ಪರಿಶೀಲಿಸಿ ಹೆಚ್ಚಿನ ಪರಿಹಾರ ನೀಡಬೇಕು ಹಾಗೂ ರಾಜ್ಯದಲ್ಲಿ ಇತ್ತೀಚಿಗೆ ಉಂಟಾದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕೆಂದು ರಾಜ್ಯ ರೈತ ಸಂಘ ಹಸಿರು ಸೇನೆ ಪ್ರತಿಭಟನೆ ನಡೆಸಿತು.
ನಗರದ ಡಾ.ಬಿ.ಆರ್.ಅಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಬಳಿಕ ಜಿಲ್ಲಾಡಳಿತದ ಸಿಬ್ಬಂದಿಗೆ ಮನವಿ ಪತ್ರ ನೀಡಿದರು. ಜಿಲ್ಲೆಯಲ್ಲಿ ನೆರೆ ಬಂದರೂ ಬಿಡಿಗಾಸು ಪರಿಹಾರ ನೀಡಿಲ್ಲ, ನದಿ ಪ್ರದೇಶದ ಬಳಿಯ ಹಲವು ಗ್ರಾಮಗಳು ಜಲಾವೃತ್ತವಾಗಿವೆ, ಅಲ್ಲದೇ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಾಶವಾಗಿದೆ. ಕೇಂದ್ರದಿಂದ ಇದುವರೆಗೆ ಒಂದು ನಯಾ ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ಕಡೆ ಪ್ರವಾಹ ಮತ್ತೊಂದೆಡೆ ಬರವಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ನಮ್ಮ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರುವ ನಿಟ್ಟಿನಲ್ಲಿ ಹೋರಾಟ ಮಾಡಲು ಮುಂದಾದರೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಾರದೇ ನಮ್ಮನ್ನು ಕಚೇರಿಗೂ ಬಿಡದೇ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ದೂರಿದರು.