ರಾಯಚೂರು: ಜಿಲ್ಲೆ ಲಿಂಗಸುಗೂರು ತಾಲೂಕು ಮುದಗಲ್ಲ ಪಟ್ಟಣದ ಕೇಂದ್ರೀಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.
ನಿನ್ನೆ ಮಧ್ಯರಾತ್ರಿ ಶಾಲಾ ಕೊಠಡಿಗಳ ಬಾಗಿಲುಗಳನ್ನು ಮುರಿದು ಕಳ್ಳರು ಹೊಳ ನುಗ್ಗಿದ್ದು, ಏನೇನು ಕಳ್ಳತನಮಾಡಿದ್ದಾರೆ ಎಂಬುವುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕ ನಾಗೇಶ ಮುದಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.