ETV Bharat / state

ಬಿಜೆಪಿ ರಾಜ್ಯಾಧ್ಯಕ್ಷರಾಗುವ ವಿ.ಸೋಮಣ್ಣರ ಅಪೇಕ್ಷೆ ತಪ್ಪೇನಿಲ್ಲ: ಕಟೀಲ್ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್

ಮಾಜಿ ಸಚಿವ ವಿ. ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷರಾಗುವ ಇಂಗಿತ ವ್ಯಕ್ತಪಡಿಸಿರುವುದಕ್ಕೆ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದರು.

BJP State President Nalin Kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್
author img

By

Published : Jun 23, 2023, 9:34 PM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮಾತನಾಡಿದರು.

ರಾಯಚೂರು: ಮಾಜಿ ಸಚಿವ ವಿ.ಸೋಮಣ್ಣ‌ ಪಕ್ಷದ ಹಿರಿಯ ನಾಯಕರು. ಅವರು ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಅಪೇಕ್ಷೆ ಪಟ್ಟಿರುವುದು ತಪ್ಪೇನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ವಿ.ಸೋಮಣ್ಣ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ವಿಚಾರವಾಗಿ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ವಿಧಾನಸಭೆ ವಿಚಾರಕ್ಕೆ ತುಂಬಾ ರಿಸ್ಕ್ ತಗೊಂಡಿದ್ದರು ಎನ್ನುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಮೂಲಕ ರಿಸ್ಕ್ ತೆಗೆದುಕೊಂಡಿದ್ದರು. ಚುನಾವಣೆಯಲ್ಲಿ ಸೋತಾಗ ಈ ರೀತಿ ಭಾವನೆಗಳನ್ನು ವ್ಯಕ್ತಪಡಿಸುವುದು ಸಹಜ. ನಿರ್ಣಯವನ್ನು ಪಕ್ಷದ ಹಿರಿಯ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದಿದ್ದರು. ಆದರೆ‌, ಎಲ್ಲದಕ್ಕೂ ಷರತ್ತು ಹಾಕುತ್ತಿದ್ದಾರೆ. 200 ಯುನಿಟ್​ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ಹೇಳಿದ್ದರು. ಮತ್ತೊಮ್ಮೆ ದರ ಹೆಚ್ಚಳ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಈ ವೇಳೆ ರಾಯಚೂರು ನಗರ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಹಾಗೂ ಇತರರಿದ್ದರು.

ನಾನು ಚುನಾವಣೆಯಲ್ಲಿ ಸೋಲು ಅನುಭವಿಸಿರಬಹುದು. ಆದ್ರೆ, ನನಗೆ ನೀಡಿದ್ದ ಟಾಸ್ಕ್​ನಲ್ಲಿ ಜಯಗಳಿಸಿದ್ದೇನೆ. ಇದರಿಂದ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್​​ಗೆ ಮನವಿ ಮಾಡಿಕೊಂಡಿದ್ದೇನೆ. ನೂರು ದಿನಗಳವರೆಗೆ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ, ಪಕ್ಷ ಸಂಘಟನೆಯಲ್ಲಿ ಯಾವ ರೀತಿ ತೊಡಗಬೇಕೆಂಬುದನ್ನು ತೋರಿಸಿ ಕೊಡುತ್ತೇನೆ ಎಂದು ಮಾಜಿ ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ವಿಜಯನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದರು.

ಈಗಾಗಲೇ ನಾನು ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಪಕ್ಷದ ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ನಾನು 45 ವರ್ಷ ರಾಜಕಾರಣ ಮಾಡಿದ ಅನುಭವ ಹೊಂದಿದ್ದು, ಅದರ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವಂತೆ ಕೇಳಿದ್ದೇನೆ. ಜೊತೆಗೆ ಪತ್ರ ಬರೆದಿದ್ದೇನೆ. ಪಕ್ಷ ಕೊಟ್ಟಿರುವ ಎಲ್ಲ ಟಾಸ್ಕ್​ಗಳನ್ನು ಸ್ವೀಕರಿಸಿ, ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಆಗಿದೆ. ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಶಕ್ತಿಯೂ ನನಗೆ ಇದೆಯೇ ಎಂದು ಕೆಲವರು ಮಾತಾಡಿಕೊಳ್ಳುತ್ತಿರಬಹುದು. ಆದ್ರೆ ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ಎಲ್ಲರನ್ನೂ ಒಗ್ಗಟ್ಟಿನಿಂದ ಕರೆದುಕೊಂಡು ಹೋಗುತ್ತೇನೆ. ದೊಡ್ಡವರಂತೆ ನನ್ನದೂ ತೆರೆದ ಪುಸ್ತಕ ಎಂದು ತಮ್ಮ ಹಿರಿತನವನ್ನು ಸಮರ್ಥಿಸಿಕೊಂಡರು.

ರಾಜ್ಯಾಧ್ಯಕ್ಷ ಸ್ಥಾನದ ರೇಸ್​​ನಲ್ಲಿರುವ ಆರ್. ಅಶೋಕ್​​ಗೆ ಟಾಂಗ್ ನೀಡಿದ ಸೋಮಣ್ಣ ನಾನು ಚುನಾವಣೆಗೆ ಮುನ್ನವೇ ರಾಜ್ಯಾಧ್ಯಕ್ಷ ಸ್ಥಾನವನ್ನು ಕೇಳಿದ್ದೇನೆ. ನನಗೂ ನೂರು ದಿನಗಳವರೆಗೆ ಅವಕಾಶ ನೀಡಲಿ ಎಂದು ಅವರು, ನಾನು ಹೇಡಿ ಅಲ್ಲ, ಯಾವುದೇ ಸವಾಲಿನ ಹುದ್ದೆಯಾದರೂ ಸ್ವೀಕರಿಸಲಾಗುವುದು. ಅಶೋಕ್ ರಾಜ್ಯಾಧ್ಯಕ್ಷರಾದರೆ ನಾವು ಬೇಡ ಅಂತೀವಾ? ನನ್ನದೇ ಆದ ಒಂದು ಕಾರ್ಯವೈಖರಿಯಿದ್ದು, ನಾನು ತೆಗೆದುಕೊಂಡಿರುವ ರಿಸ್ಕ್ ಇವರು ಯಾರೂ ಕೂಡ ತೆಗೆದುಕೊಂಡಿಲ್ಲ. ಕನಕಪುರದಲ್ಲಿ ಆರ್​.ಅಶೋಕ್ ರಿಸ್ಕ್ ತೆಗೆದುಕೊಂಡಿಲ್ಲ ಎಂದು ಜನರೇ ಹೇಳುತ್ತಿದ್ದಾರೆ. ಎಲ್ಲರಿಗಿಂತಲೂ ನಾನು ಚೆನ್ನಾಗಿ ಕಾರ್ಯನಿರ್ವಹಿಸಿದ್ದೇನೆ. ಸಿದ್ದರಾಮಯ್ಯನವರ ಎದುರು ಚುನಾವಣೆಗೆ ನಿಲ್ಲುವುದಕ್ಕೆ ನನಗೇನು ಹುಚ್ಚು ಹಿಡಿದಿಕೊಂಡಿತ್ತಾ? ಎಂದು ಹೇಳಿದರು.

ಇದನ್ನೂ ಓದಿ: ನೂತನ ಶಾಸಕರ ತರಬೇತಿ ಶಿಬಿರದ ಬಗ್ಗೆ ಪೂರ್ವಾಗ್ರಹಪೀಡಿತ ಹೇಳಿಕೆ ಸರಿಯಲ್ಲ: ಸ್ಪೀಕರ್ ಯು.ಟಿ. ಖಾದರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.