ಲಿಂಗಸುಗೂರು(ರಾಯಚೂರು): ಇಂದು ತಾಲೂಕಿನಲ್ಲಿ ಮೂರು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ತಾಲೂಕಿನ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಹಾಗೂ ಉಪ್ಪಾರ ನಂದಿಹಾಳದ ಇಬ್ಬರು ಕೂಲಿ ಕಾರ್ಮಿಕರು ಸೇರಿದಂತೆ ಮೂವರಿಗೆ ಸೋಂಕು ತಗುಲಿದೆ.
ಸೋಂಕು ತಗುಲಿದ್ದ ಕಾರ್ಮಿಕನ ಸಂಪರ್ಕದಲ್ಲಿದ್ದ ಮತ್ತೊಬ್ಬ ಕಾರ್ಮಿಕನಿಗೆ ಹಾಗೂ ಮಹಾರಾಷ್ಟ್ರದಿಂದ ವಾಪಸ್ಸಾಗಿ ಹೋಮ್ ಕ್ವಾರಂಟೈನ್ ನಲ್ಲಿದ್ದ ಉಪ್ಪಾರನಂದಿಹಾಳ ಗ್ರಾಮದ ಅತ್ತೆ- ಸೊಸೆಗೆ (ಕೂಲಿ ಕಾರ್ಮಿಕರು) ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು, ಮೂವರನ್ನು ರಾಯಚೂರು ಕೋವಿಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಸ್ಥಳಾಂತರಿಸಲಾಗಿದೆ.
ಮೂವರು ಸೋಂಕಿತರ ಟ್ರಾವೆಲ್ ಹಿಸ್ಟರಿ ಆಧರಿಸಿ ಸಂಪರ್ಕಕ್ಕೆ ಬಂದಿರುವವರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದ್ದು, ಹೋಮ್ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಕೋವಿಡ್ ಪೀಡಿತರ ಮಾಹಿತಿಯನ್ನು ಅಧಿಕೃತ ಘೋಷಣೆ ಮಾಡಬೇಕಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ, ಡಿವೈಎಸ್ಪಿ ಎಸ್.ಎಸ್ ಹುಲ್ಲೂರು ನೇತೃತ್ವದಲ್ಲಿ ತಾಲೂಕು ಅಡಳಿತ ಉಪ್ಪಾರ ನಂದಿಹಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.