ರಾಯಚೂರು: ಕೋವಿಡ್ ವೈರಸ್ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದೂ ಸಹ ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದಾರೆ.
ಓಪೆಕ್ ಆಸ್ಪತ್ರೆಯಲ್ಲಿ ಇಬ್ಬರು ಮತ್ತು ನವೋದಯ ಕೋವಿಡ್ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಿಂಗಸೂಗೂರು ತಾಲೂಕಿನ ನರಕಲದಿನ್ನಿಯ 80 ವರ್ಷದ ವ್ಯಕ್ತಿಗೆ ಕಳೆದ ಜು.31 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಮತ್ತು ರಾಯಚೂರು ನಗರದ 33 ವರ್ಷದ ವ್ಯಕ್ತಿಗೆ ಕಳೆದ ಆ.5 ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ನಂತರ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಯಾದಗಿರಿ ಮೂಲದ 29 ವರ್ಷದ ವ್ಯಕ್ತಿ ಸಹ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.