ETV Bharat / state

ರಾಯಚೂರಿನಲ್ಲಿ ಗೂಡ್ಸ್​ ವಾಹನ ಬೈಕ್​ ಮಧ್ಯೆ ಭೀಕರ ಅಪಘಾತ.. ಮೂವರ ದುರ್ಮರಣ - ETV Bharat Kannada

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿದ್ದಾರೆ.

road accident in Raichur
ರಾಯಚೂರಿನಲ್ಲಿ ರಸ್ತೆ ಅಪಘಾತ
author img

By

Published : Aug 16, 2022, 1:03 PM IST

ರಾಯಚೂರು: ಐಸರ್ ಗೂಡ್ಸ್ ವಾಹನ ಹಾಗೂ ಬೈಕ್ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ. ಮೃತರನ್ನು ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ‌ ಬಸವರಾಜ್ ಮಸಳಿ(40), ಭೀಮವ್ವ ಮಸಳಿ (50) ಹಾಗೂ ನರೇಶ್(8) ಎಂದು ಗುರುತಿಸಲಾಗಿದೆ.

ರಾಯಚೂರಿನಲ್ಲಿ ರಸ್ತೆ ಅಪಘಾತ

ಬೈಕ್​​ನಲ್ಲಿ ಈ ಮೂವರು ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕುರ್ಡಿಯಿಂದ ಕಲ್ಲೂರು ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಾಯಚೂರು ಮಾರ್ಗವಾಗಿ ಹೊರಟಿದ್ದ ಐಸರ್​​ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕ್​​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ.

ಡಿಕ್ಕಿ ರಭಸಕ್ಕೆ ರಸ್ತೆ ಪಕ್ಕದ ಜಮೀನಿಗೆ ವಾಹನ ನುಗ್ಗಿದ್ದು, ಜಮೀನಿನಲ್ಲಿ ಮೂವರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ.. ಹಲವು ಸೈನಿಕರು ಸಾವು ಶಂಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.